ಹುಬ್ಬಳ್ಳಿ: ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಮುಂಚೆಯೇ ಅವರು ಆರೋಪಮುಕ್ತರಾಗಿ ಬರಲಿದ್ದಾರೆ ಎಂದು ಸರ್ಕಾರ ಹೇಳಿತ್ತು. ಹಾಗಾಗಿ, ಈಗ ಕ್ಲೀನ್ ಚಿಟ್ ನೀಡಿರುವುದರಲ್ಲಿ ಯಾವುದೇ ಆಶ್ಚರ್ಯ ಇಲ್ಲ ಅಂತ ಎಎಪಿ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಗುತ್ತಿಗೆದಾರನ ಆತ್ಮಹತ್ಯೆಗೆ ಕಾರಣರಾದ ಸಚಿವರಿಗೆ ಕ್ಲೀನ್ ಚಿಟ್ ಕೊಡಲಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮ ನಮಗೆ ಆದರ್ಶ ಎನ್ನುವ ಬಿಜೆಪಿಯನ್ನು ಸ್ವತಃ ರಾಮ ಕೂಡ ಕ್ಷಮಿಸಲ್ಲ. ನಾವೂ ರಾಮನ ಭಕ್ತರೇ ಆದರೇ ಸರ್ಕಾರದ ನೀತಿಗಳು ಸರಿಯಿಲ್ಲ ಎಂದರು.
ಮೊಸರು, ಮಜ್ಜಿಗೆ ಸೇರಿದಂತೆ ಅಗತ್ಯ ವಸ್ತುಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದು ಬಡವರ ಮೇಲೆ ಬರೆ ಹಾಕಲಾಗಿದೆ. ಕೊಟ್ಟ ಮಾತಿನಂತೆ ಕೇಂದ್ರ ಸರ್ಕಾರ ನಡೆದುಕೊಂಡಿಲ್ಲ. ಸಂಸದರ ಆದರ್ಶ ಗ್ರಾಮಗಳು ಸಹ ಅಭಿವೃದ್ಧಿ ಕಂಡಿಲ್ಲ ಎಂದು ಕಿಡಿಕಾರಿದರು. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಅಭಿವೃದ್ಧಿಯ ದೂರದೃಷ್ಟಿಯೇ ಇಲ್ಲ. ಕೇವಲ ಕಮಿಷನ್ ರಾಜಕೀಯ ಮಾಡಿಕೊಂಡು ಜೇಬು ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/07/2022 03:41 pm