ಹುಬ್ಬಳ್ಳಿ: ಸೋನಿಯಾ ಗಾಂಧಿಯವರಿಗೆ ಇಡಿ ವಿಚಾರಣೆ ಮೂಲಕ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಈಗಾಗಲೇ ತಯಾರಿಯನ್ನು ನಡೆಸಲಾಗುತ್ತಿದೆ.
ಐಟಿ ಹಾಗೂ ಇ.ಡಿ ದಾಳಿ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಸಿದ್ಧತೆ ಮಾಡಲಾಗಿದ್ದು, ಪ್ರತಿಭಟನೆಗೆ ಕ್ಷಣಗಣನೆ ಆರಂಭವಾಗಿದೆ.
ಇನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಹುಬ್ಬಳ್ಳಿಯ ಅಂಬೇಡ್ಕರ್ ಸರ್ಕಲ್ ನಿಂದ ಚನ್ನಮ್ಮ ಸರ್ಕಲ್ ವರೆಗೂ ಮೆರವಣಿಗೆ ಮೂಲಕ ಪ್ರತಿಭಟನೆಗೆ ಮುಂದಾಗಿದೆ.
Kshetra Samachara
22/07/2022 11:19 am