ಹುಬ್ಬಳ್ಳಿ: ಸಂವಿಧಾನಿಕ ಸಾಂಸ್ಥಿಕ ಸಂಸ್ಥೆಯಾದ ಜಾರಿ ನಿರ್ದೇಶನಾಲಯ (ಇಡಿ) ವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ಕುರಿತು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.
ಹೌದು ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ನ್ಯಾಷನಲ್ ಹೆರಾಲ್ಡ್’ ಪತ್ರಿಕೆಯ ವಿಷಯವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಈ ಮೂಲಕ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಸರ್ಕಾರದ ನಡೆ ಖಂಡಿಸುವ ಪ್ರಬಲ ನಾಯಕರನ್ನು ಗುರಿಯಾಗಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಸೋನಿಯಾ ಗಾಂಧಿ ಅವರ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರ ತಪ್ಪಾಗಿ ನಡೆದುಕೊಂಡಿದೆ' ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಲಿದೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
Kshetra Samachara
22/07/2022 12:16 pm