ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನಾ ರ‌್ಯಾಲಿ ಹಮ್ಮಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಸಕಲ ವಾದ್ಯಗಳೊಂದಿಗೆ ಹುಬ್ಬಳ್ಳಿ ಪ್ರಮುಖ ರಸ್ತೆಯಲ್ಲಿ ಸಂಚರಿಸುವ ಮೂಲಕ ಪ್ರತಿಭಟನೆ ಯಶಸ್ವಿಗೊಳಿಸಿದರು.
ಹೌದು.. ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನೆ ಚೆನ್ನಮ್ಮ ವೃತ್ತದ ವರೆಗೆ ಪಾದಯಾತ್ರೆ ಮೂಲಕ ನಡೆದಿದ್ದು, ಪ್ರತಿಭಟನೆಯಲ್ಲಿ ಹಿರಿಯ ನಾಯಕರು, ಯುವ ಮುಖಂಡರು ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ನೀಡಿದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದಲ್ಲಿ ಸೋನಿಯಾಗಾಂಧಿ ಇಡಿ ವಿಚಾರಣೆ ನಡೆಯುತ್ತಿದ್ದು, ಇದನ್ನು ಖಂಡಿಸಿ ಪ್ರತಿಭಟನೆ ಕರೆ ನೀಡಿರುವ ಕಾಂಗ್ರೆಸ್. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ರ‌್ಯಾಲಿ ಪೂರ್ಣಗೊಂಡಿದ್ದು, ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಮುಕ್ತಾಯಗೊಂಡಿತು.
ಒಟ್ಟಿನಲ್ಲಿ ಕಾಂಗ್ರೆಸ್ ಇಂತಹದೊಂದು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಬಿಜೆಪಿ ಸರ್ಕಾರಕ್ಕೆ ಪಾಠ ಕಲಿಸುವ ಹಿನ್ನೆಲೆಯಲ್ಲಿ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಿತು.
Kshetra Samachara
22/07/2022 01:38 pm