ಹುಬ್ಬಳ್ಳಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ. ಅವರಿಗೆ ತಕ್ಕಪಾಠ ಕಲಿಸುವ ಕಾರ್ಯವನ್ನು ಮಾಡುತ್ತೇವೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಪ್ರತಿಭಟನೆ ವೇದಿಕೆ ಮೇಲೆ ಜಂಟಿಯಾಗಿ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ ಹಾಗೂ ಐಟಿ ಮೂಲಕ ಕಾಂಗ್ರೆಸ್ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಈಗ ಹುಬ್ಬಳ್ಳಿಯಲ್ಲಿ ಸಂಯುಕ್ತ ಕರ್ನಾಟಕ ಪತ್ರಿಕೆ ಇದೆ. ಯಾವುದೇ ಒಬ್ಬ ವ್ಯಕ್ತಿಯ ಮಾಲೀಕತ್ವದಲ್ಲಿ ಇಲ್ಲಾ ಅದೊಂದು ಟ್ರಸ್ಟ್ ಅದಕ್ಕೆ ಅಧ್ಯಕ್ಷ ಉಪಾಧ್ಯಕ್ಷರು ಪದಾಧಿಕಾರಿಗಳು ಇರುತ್ತಾರೆ. ಹಾಗೇ ತಾನೇ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಸಹ ಅದೊಂದು ಟ್ರಸ್ಟ್. ಅದಕ್ಕೆ ಶ್ರೀಮತಿ ಸೋನಿಯಾ ಗಾಂಧಿ ಅವರು ಸಹ ಟ್ರಸ್ಟಿ ಇದ್ದರು.ಅಂದ ಮಾತ್ರಕ್ಕೆ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದರೇ ಹೇಗೆ. ಇದೊಂದು ಸೇಡಿನ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
Kshetra Samachara
22/07/2022 03:50 pm