ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಇ.ಡಿ ತನಿಖೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಹುಬ್ಬಳ್ಳಿಗೆ ಆಗಮಿಸಿ ಪ್ರತಿಭಟನೆ ಮಾಡಿ, ನಂತರ ಹುಬ್ಬಳ್ಳಿಯ ಬೆಂಗೆರಿಯಲ್ಲಿನ ಖಾದಿ ಗ್ರಾಮೋದ್ಯೋಗಕ್ಕೆ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದರು.
ನಂತರ ಭಾರತ ರಾಷ್ಟ್ರ ಧ್ವಜವನ್ನು ನೆಯಿವ ಕಾರ್ಮಿಕರೊಂದಿಗೆ ಮಾತನಾಡಿ, ರಾಷ್ಟ್ರ ಧ್ವಜ ಮಾಡುವ ವೈಖರಿ ಕುರಿತು ಪರಿಶೀಲಿಸಿ ಖಾದಿ ಗ್ರಾಮೋದ್ಯೋಗದಲ್ಲಿನ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿ ಸರಕಾರಕ್ಕೆ ಎಚ್ಚರಿಕೆ ನೀಡುವ ವಿಚಾರ ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/07/2022 04:59 pm