ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ನವಲಗುಂದ : 75ನೇ ವಸಂತಕ್ಕೆ ಸಿದ್ದರಾಮಯ್ಯ ಕಾಲಿಡುತ್ತಿದ್ದು, ಈ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅಮೃತಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಇದರ ಪ್ರಯುಕ್ತ ಸೋಮವಾರ ನವಲಗುಂದ ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ ಹುಟ್ಟುಹಬ್ಬವನ್ನು ಬಹು ವಿಜೃಂಭಣೆಯಿಂದ ಆಚರಿಸಲು ಕಾಂಗ್ರೆಸ್ ಮತ್ತು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ. ಸುಮಾರು ಐದು ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ಬೆಣ್ಣೆ ನಗರಿ ಯಲ್ಲಿ ಅಮೃತ ಮಹೋತ್ಸವ ಆಚರಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಇದರ ನಿಮಿತ್ತ ಇಂದು ನವಲಗುಂದ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ಭವನದಲ್ಲಿ ಪೂರ್ವಭಾವಿ ಸಭೆ ಸಭೆಯನ್ನು ನಡೆಸಿ, ನವಲಗುಂದ ವಿಧಾನಸಭಾ ವತಿಯಿಂದ ಪಾಲ್ಗೊಳ್ಳಲು ಯಾವೆಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಸಂದರ್ಭದಲ್ಲಿ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ, ಜಿಲ್ಲಾ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಮಾಜಿ ಸಚಿವ ಕೆ ಎನ್ ಗಡ್ಡಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ವಿಜಯ ಕುಲಕರ್ಣಿ, ನವಲಗುಂದ ಬ್ಲಾಕ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ, ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ ಸೇರಿದಂತೆ ಹಲವು ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/07/2022 04:26 pm

Cinque Terre

9.53 K

Cinque Terre

0

ಸಂಬಂಧಿತ ಸುದ್ದಿ