ಕುಂದಗೋಳ: ಜನ ಸಾಮಾನ್ಯರ ಸರ್ವಾಂಗೀಣ ವಿಕಾಸವೇ ಸರ್ಕಾರದ ಧ್ಯೇಯವಾಗಿದೆ. ದೇಶದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭಾವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಇಂದು ನಾಡಕಚೇರಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜನರ ಕಲ್ಯಾಣಕ್ಕಾಗಿ ಸರ್ಕಾರವು ಸಾಕಷ್ಟು ಯೋಜನೆ ಕಾರ್ಯಕ್ರಮ ಜಾರಿಗೊಳಿಸುತ್ತಿದೆ. ಕೃಷಿಕರ ಹಿತರಕ್ಷಣೆಗಾಗಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ರೈತರನ್ನು ಸ್ವಾಭಿಮಾನಿಯಾಗಿಸಲು ಕೃಷಿ ಸಮ್ಮಾನ್ ಯೋಜನೆ, ಮಹಿಳೆಯರ ಆರೋಗ್ಯ ಮತ್ತು ಆಹಾರ ತಯಾರಿಕೆಗೆ ಅನುಕೂಲ ಕಲ್ಪಿಸಲು ಉಜ್ವಲ ಯೋಜನೆ, ಜಲಜೀವನ ಮಿಷನ್, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಸಾರ್ವಜನಿಕರಿಗೆ ವಿವಿಧ ಸೇವೆ ಒದಗಿಸಲಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನಾಡಕಚೇರಿ ಉದ್ಘಾಟನೆಯಾಗಿರುವುದು ಸಂತಸ ತಂದಿದೆ ಎಂದರು.
ಈ ವೇಳೆ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಎಸ್.ಐ.ಚಿಕ್ಕನಗೌಡ್ರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಗ್ರಾ.ಪಂ.ಅಧ್ಯಕ್ಷೆ ಮುಕ್ತುಂಬಿ ಅಲ್ಲಾಭಕ್ಷ ನದಾಫ್, ಉಪಾಧ್ಯಕ್ಷ ಫಕ್ಕೀರೇಶ ಪಶುಪತಿಹಾಳ , ಜಿ.ಪಂ. ಮಾಜಿ ಸದಸ್ಯ ನಾಗನಗೌಡ ಪಾಟೀಲ, ತಹಶೀಲ್ದಾರ ಅಶೋಕ ಶಿಗ್ಗಾಂವಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ್ ಕುರಿಯವರ ಇದ್ದರು.
Kshetra Samachara
25/07/2022 05:58 pm