ಹುಬ್ಬಳ್ಳಿ: ಪಂಚಾಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಹೋರಾಟವನ್ನು ತೀವ್ರ ಸ್ವರೂಪಕ್ಕೆ ತಗೆದುಕೊಂಡು ಹೋಗುವ ನಿಟ್ಟಿನಲ್ಲಿ ಇದೇ ಜುಲೈ 30ಕ್ಕೆ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಾಲ್ಕು ಬಾರಿ ಮೀಸಲಾತಿ ನೀಡುವ ಭರವಸೆ ಕೊಟ್ಟು ಮಾತು ಮರೆತಿದ್ದಾರೆ. ಅವರು ಕೊಟ್ಟ ಮಾತು ನೆನಪಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಬೃಹತ್ ಪ್ರತಿಭಟನಾ ರ‍್ಯಾಲಿ ಇದೇ ಜುಲೈ 30 ರಂದು ಹುಬ್ಬಳ್ಳಿಯ ನೆಹರೂ ಮೈದಾನದಿಂದ ಚೆನ್ನಮ್ಮ ವೃತ್ತದವರಗೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈಗಾಗಲೇ ಹುಬ್ಬಳ್ಳಿ, ಧಾರವಾಡ ನಗರದಲ್ಲಿ ಜಾಗೃತಿ ಸಭೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಚುನಾವಣೆ ಬರುತ್ತಿದೆ ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ಘಂಟೆ ಬಾರಿಸಲು ಹಾಗೂ ಸರ್ಕಾರ ಮಾತುಕೊಟ್ಟು ಮೌನವಾಗಿರುವುದಕ್ಕೆ ಎಚ್ಚರಿಸುವ ಸದುದ್ದೇಶದಿಂದ ನಾವು ಮನೆ ಮನೆಗೆ ಪ್ರತಿಭಟನೆ ಮಾಡುತ್ತೇವೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/07/2022 08:19 am