ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಷ್ಟ್ರಧ್ವಜ ಸಂಹಿತೆಯನ್ನು ಜಾರಿ ಮಾಡಿದ ಹಿನ್ನೆಲೆಯಲ್ಲಿ, ದೇಶದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.
ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆದಿದೆ. ಈ ವೇಳೆ ಆಪ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
28/07/2022 02:39 pm