ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಂಚಮಸಾಲಿ 2ಎ ಮೀಸಲಾತಿಗೆ ಒತ್ತಾಯಿಸಿ ಗಣ್ಯರಿಂದ ಸಭೆ

ಹುಬ್ಬಳ್ಳಿ: ಪಂಚಮಸಾಲಿ ಲಿಂಗಾಯತ ಸಮಾಜದವರಿಗೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಂಡ ಹಿನ್ನೆಲೆಯಲ್ಲಿ, ನಗರದ ನೆಹರೂ ಮೈದಾನದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದರು. ಈ ಸಭೆಗೆ ರೈತ ಗೀತೆ ಹಾಡುವುದರ ಮೂಲಕ ಚಾಲನೆ ನೀಡಿದರು.

ಈ ಸಭೆಯಲ್ಲಿ ಮಾಜಿ ಶಾಸಕ ಎಸ್.ಐ ಚಿಕ್ಕನಗೌಡ್ರ, ಅರವಿಂದ ಕಟಗಿ, ನಾಗರಾಜ ಗೌರಿ, ವೀರೇಶ ಹುಂಡಿ, ಬಾಪುಗೌಡ ಪಾಟೀಲ್, ಶಶಿಕಾಂತ ಪುಟ್ಟಸ್ವಾಮಿ ಸೇರಿದಂತೆ ಹಲವಾರು ಪಂಚಮಸಾಲಿ ಮುಖಂಡರು ಭಾಗಿಯಾಗಿದ್ದರು.

Edited By : Nagesh Gaonkar
Kshetra Samachara

Kshetra Samachara

30/07/2022 02:53 pm

Cinque Terre

22.89 K

Cinque Terre

2

ಸಂಬಂಧಿತ ಸುದ್ದಿ