ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 20 ರೂ. ಕೊಟ್ಟು ಧ್ವಜ ಖರೀದಿಸಿ ಮನೆಯ ಮೇಲೆ ಹಾರಿಸಿ; ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಒಂದು ಧ್ವಜಕ್ಕೆ 20 ರೂ. ಕೊಟ್ಟು‌ ಸಾರ್ವಜನಿಕರು ಖರೀದಿ ಮಾಡಬೇಕು. ಆಗಸ್ಟ್ 13ರಿಂದ ಆಗಸ್ಟ್ 15ರವರೆಗೆ ಧ್ವಜವನ್ನು ಮನೆಗಳ ಮೇಲೆ ಹಾರಿಸಬಹುದು. ನ್ಯಾಯಬೆಲೆ ಅಂಗಡಿ, ಮಾಲ್, ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಧ್ವಜ ದೊರೆಯುತ್ತವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ನಮಗೆ ಹತ್ತುಕೋಟಿ ಧ್ವಜ ಬೇಕು. ಅದನ್ನು ಪೂರೈಕೆ ಮಾಡೋಕೆ ಆಗೋದಿಲ್ಲ. ಖಾದಿ ಧ್ವಜಕ್ಕೆ ಹೆಚ್ಚು ದುಡ್ಡು ಕೊಡಬೇಕು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದರಿಂದ ಧ್ವಜ ಸಂಹಿತೆಗೆ ತಿದ್ದುಪಡಿ ತಂದಿದ್ದು ಎಂದರು.

ರಾಷ್ಟ್ರೀಯ ಧ್ವಜದ ಸಂಹಿತೆಯಲ್ಲಿ ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ರಾಹುಲ್ ಗಾಂಧಿ ಬರುವ ಬಗ್ಗೆ ಹೆಚ್ಚು ನಾನು ಮಾತನಾಡುವುದಿಲ್ಲ. ರಾಹುಲ್ ಅವರಿಗೆ ಮಾಡೋಕೆ ಬೇರೆ ಒಳ್ಳೆಯ ಕೆಲಸ ಇದೆ ಎಂದು ಅವರು ಹೇಳಿದರು.

ಇನ್ನೂ ಅವಳಿನಗರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಅಧಿಕಾರಿಗಳು ಸ್ಪಂದಿಸಬೇಕು. ಯಾವುದೇ ಕಾರಣಗಳನ್ನು ನೀಡಿ ಜನರಿಗೆ ಸಮಸ್ಯೆ ಉಂಟು ಮಾಡುವ ಕೆಲಸವನ್ನು ಮಾಡಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

Edited By : Nagesh Gaonkar
Kshetra Samachara

Kshetra Samachara

30/07/2022 04:27 pm

Cinque Terre

37.58 K

Cinque Terre

4

ಸಂಬಂಧಿತ ಸುದ್ದಿ