ಹುಬ್ಬಳ್ಳಿ: ದಕ್ಷಿಣ ಕನ್ನಡದಲ್ಲಿ ಪ್ರವೀಣ ಹತ್ಯೆ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಪದೇ ಪದೇ ಇಂತಹ ಹತ್ಯೆಗಳು ನಡೆಯುತ್ತಿವೆ. ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಅಂತಹ ಹತ್ಯೆಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಯ ಬಗ್ಗೆ ತನಿಖೆ ವಿಚಾರದಲ್ಲಿ ನಾವು ಭಾಗಿಯಾಗುವುದಿಲ್ಲ. ಸಾವಿಗೆ ನ್ಯಾಯ ಕೊಡಿಸುವ ವಿಚಾರ ಸರ್ಕಾರಕ್ಕೆ ಇದ್ದರೆ ನ್ಯಾಯ ಒದಗಿಸಲಿ ಎಂದರು.
ದಕ್ಷಿಣ ಕನ್ನಡದಲ್ಲಿ ಪ್ರವೀಣ ಹತ್ಯೆ ಬಳಿಕ, ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರಿಗೆ ಸರ್ಕಾರದ ಮೇಲೆ ನಂಬಿಕೆಯಿತ್ತು. ಆದರೆ ಸರ್ಕಾರ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಈಗಾಗಲೇ ರಾಜೀನಾಮೆ ಕೊಟ್ಟಿರುವ ಬಿಜೆಪಿ ಕಾರ್ಯಕರ್ತರ ನೋವು ಏನೆಂಬುದು ನನಗೆ ಗೊತ್ತಿದೆ. ಅವರ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಬಿಜೆಪಿ ಕಾರ್ಯಕರ್ತರು ನಮ್ಮ ಪಕ್ಷದ ತತ್ವ ಸಿದ್ದಾಂತ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡರೆ ನಮ್ಮ ಅಭ್ಯಂತರವಿಲ್ಲ. ಹತ್ಯೆಗೆ ಒಳಗಾಗಿ ಅಸುನೀಗಿದ ಮೂವರ ಕುಟಂಬಸ್ಥರ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸ ಮಾಡಲಿದ್ದೇನೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
31/07/2022 09:22 pm