ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆ.2ಕ್ಕೆ ಹುಬ್ಬಳ್ಳಿಗೆ ರಾಹುಲ್ ಗಾಂಧಿ ಆಗಮನ: ಡಿಕೆಶಿ

ಹುಬ್ಬಳ್ಳಿ: ಆಗಸ್ಟ್ 2 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ಅಂದು ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಐತಿಹಾಸಿಕ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 6 ಗಂಟೆಗೆ ಹುಬ್ಬಳ್ಳಿಗೆ ರಾಹುಲ್ ಆಗಮಿಸಲಿದ್ದು, ಮರುದಿನ ಜಿಲ್ಲೆಯ ಮುರುಘಾಮಠ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಭೇಟಿ ನೀಡುವ ಸಾಧ್ಯತೆ ಇದೆ. ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ದೇಶದಲ್ಲಿ ಜನರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದು, ಹಾಲಿನಿಂದ ಬ್ಯಾಂಕ್ ಚೆಕ್ ವರೆಗೆ ಜಿಎಸ್ ಟಿ ಬರೆ ಹಾಕುತ್ತಿದೆ. ಅದನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಹೋರಾಟ ಮಾಡಲು ರಾಜಸ್ಥಾನದಲ್ಲಿ ನಡೆದ ಚಿಂತನ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಅದರಂತೆ ಪ್ರತಿಕ್ಷೇತ್ರದಿಂದ ಪಾದಯಾತ್ರೆ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಸೂಚನೆ ಕೊಡಲಾಗಿದೆ. ಈ ಸಂಬಂಧ 100 ಕ್ಕೂ ಕ್ಷೇತ್ರದಲ್ಲಿ ಸಿದ್ದತೆ ನಡೆಸಿದ್ದಾರೆ ಎಂದರು.

Edited By : Shivu K
Kshetra Samachara

Kshetra Samachara

31/07/2022 10:07 pm

Cinque Terre

94.11 K

Cinque Terre

17

ಸಂಬಂಧಿತ ಸುದ್ದಿ