ಧಾರವಾಡ: ವೀರಶೈವ ಲಿಂಗಾಯತ ಸಮುದಾಯವನ್ನು ಇತರೆ ಹಿಂದುಳಿದ ವರ್ಗ (ಓಬಿಸಿ)ಗಳ ಪಟ್ಟಿಯಲ್ಲಿ ಸೇರಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಲೇ ಇದೆ. ಈಗ ಇದೇ ಬೇಡಿಕೆ ಇಟ್ಟುಕೊಂಡು ವೀರಶೈವ ಲಿಂಗಾಯತ ಮುಖಂಡರು ಪ್ರತಿಭಟನೆ ನಡೆಸಿದ್ದು, ಇದಕ್ಕೆ ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಕೂಡ ಸಾಥ್ ನೀಡಿದ್ದಾರೆ.
ಧಾರವಾಡದ ಲಿಂಗಾಯತ ಭವನದಿಂದ ದೊಡ್ಡಮಟ್ಟದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಕೂಡ ಪಾಲ್ಗೊಂಡಿದ್ದರು.
ಅಲ್ಲಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಬಂದು ತಲುಪಿತು. ಜಿಲ್ಲಾಧಿಕಾರಿ ಕಚೇರಿ ಬಳಿ ಕೆಲಹೊತ್ತು ಪ್ರತಿಭಟನೆ ನಡೆಸಿದ ಮುಖಂಡರು, ವೀರಶೈವ ಲಿಂಗಾಯತ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸುತ್ತ ಬರಲಾಗಿದೆ. ಆದರೆ, ಆ ಬೇಡಿಕೆ ಇದುವರೆಗೂ ಈಡೇರಿಲ್ಲ. ಆದಷ್ಟು ಬೇಗ ಸರ್ಕಾರ ಈ ಬೇಡಿಕೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ ಮುಖಂಡರು, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.
Kshetra Samachara
01/08/2022 08:27 pm