ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಾನು ಮುಂದಿನ ಸಿಎಂ ಎಂಬೋದು ಮಾಧ್ಯಮ ಸೃಷ್ಟಿ: ಸಿದ್ದರಾಮಯ್ಯ !

ಹುಬ್ಬಳ್ಳಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜಕೀಯ ವ್ಯವಹಾರ ಸಮಿತಿ ಮತ್ತು ಮುಂಬರುವ ಚುನಾವಣೆ ಬಗ್ಗೆ ಸಭೆ ನಡೆಯಲಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ ಬರುತ್ತಿಲ್ಲ. ಮುನಿಯಪ್ಪ ಅವರಿಗೆ ಹುಷಾರಿಲ್ಲ, ಖರ್ಗೆಯವರು ಹೆರಾಲ್ಡ್ ಪತ್ರಿಕೆ ದಾಳಿ ಕಾರಣಕ್ಕೆ ದೆಹಲಿಯಲ್ಲಿ ಬ್ಯುಸಿ ಇದ್ದಾರೆ. ರಾಹುಲ್ ಗಾಂಧಿ ಜೊತೆ ಬರಬೇಕಿತ್ತು. ಮುನಿಯಪ್ಪಗೆ ಡೆಂಘಿ ಜ್ವರ ಬಂದಿದೆ ಕರೆ ಮಾಡಿ ತಿಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರಿಗೆ ರೆಗ್ಯೂಲರ್‌ ಬೇಲ್ ಸಿಕ್ಕಿದ್ದು ನಿರೀಕ್ಷಿತ. ಇದು ಸಿದ್ದರಾಮೋತ್ಸವ ಅಲ್ಲ, ಇದು ಅಮೃತೋತ್ಸವ. 75 ವರ್ಷ ತುಂಬಿದಾಗ ಏನಂತ ಕರೆಯೋದು? ನಮ್ಮ ಸ್ನೇಹಿತರು, ಹಿತೈಷಿಗಳು ಸೇರಿಕೊಂಡು ಆಚರಿಸುತ್ತಿದ್ದಾರೆ.

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ- ಎಂಬುದು ಮಾಧ್ಯಮಗಳ ಸೃಷ್ಟಿ. ಅಭಿಮಾನಿಗಳ ಸೃಷ್ಟಿ ಅಲ್ಬಂ ಸಾಂಗ್ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮದು ಯಾವುದೇ ಬೇರೆ ಬಣ ಇಲ್ಲ, ನಮ್ಮದು ಒಂದೇ ಬಣ, ಅದು ಸೋನಿಯಾ ಗಾಂಧಿ ರಾಹುಲ್ ಗಾಂಧಿ ಬಣ ಎಂದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/08/2022 07:34 pm

Cinque Terre

36.19 K

Cinque Terre

1

ಸಂಬಂಧಿತ ಸುದ್ದಿ