ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚುನಾವಣಾ ಪೂರ್ವ ತಂತ್ರಗಾರಿಕೆ:ರಾಗಾ ನೇತೃತ್ವದಲ್ಲಿ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ.!

ಹುಬ್ಬಳ್ಳಿ: ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಚುನಾವಣಾ ಕಾರ್ಯತಂತ್ರಗಳ ಕುರಿತಂತೆ ಚರ್ಚಿಸಲು ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಯಿತು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತ್ತಿತರ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ಎಂ.ಎಲ್.ಸಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಾರಿಕೆ ಹಾಗೂ ಚುನಾವಣೆ ಸೇರಿದಂತೆ ಸದ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಲೋಪದೋಷಗಳ ಬಗ್ಗೆ ಚರ್ಚೆ ನಡೆಸಲಾಯಿತು ಎನ್ನಲಾಗಿದೆ. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು ಎನ್ನಲಾಗಿದೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/08/2022 11:04 pm

Cinque Terre

90.08 K

Cinque Terre

5

ಸಂಬಂಧಿತ ಸುದ್ದಿ