ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ದಾವಣಗೆರೆಯತ್ತ ಧಾರವಾಡ ಮಂದಿ.. ನೀರಲಕೇರಿ, ಕಬ್ಬೇರ ಸಾರಥ್ಯ

ಧಾರವಾಡ: ಬೆಣ್ಣೆ ದೋಸೆಗೆ ಫೇಮಸ್ ಆದ ದಾವಣಗೆರೆ ಇಂದು ಅಕ್ಷರಶಃ ಕಳೆಗಟ್ಟಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಅದಕ್ಕೆ ಧಾರವಾಡದಿಂದಲೂ ಸಾವಿರಾರು ಜನ ಹೋಗಿದ್ದಾರೆ.

ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಹಾಗೂ ಮಾಜಿ ಮೇಯರ್ ದಾನಪ್ಪ ಕಬ್ಬೇರ ನೇತೃತ್ವದಲ್ಲಿ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದಿಂದ ಸಾವಿರಾರು ಜನ ಸಿದ್ದರಾಮೋತ್ಸವಕ್ಕೆ ತೆರಳಿದ್ದಾರೆ. ಧಾರವಾಡದ ತಹಶೀಲ್ದಾರ ಕಚೇರಿ ಬಳಿ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳಲು ವಾಹನ ವ್ಯವಸ್ಥೆ ಮಾಡಲಾಗಿತ್ತು. ಈ ವಾಹನಗಳ ಮುಖಾಂತರ ಸಾವಿರಾರು ಜನ ದಾವಣಗೆರೆಗೆ ತೆರಳಿದ್ದಾರೆ.

ಪಿ.ಎಚ್.ನೀರಲಕೇರಿ ಹೈಕೋರ್ಟ್ ವಕೀಲರು ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡರು. ಹೀಗಾಗಿಯೇ ಕಾಂಗ್ರೆಸ್ ಪಕ್ಷವೇ ಇವರಿಗೆ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಹುದ್ದೆ ನೀಡಿದೆ. ಕಟ್ಟಾ ಕಾಂಗ್ರೆಸ್ ಕಾರ್ಯಕರ್ತರಾಗಿರುವ ನೀರಲಕೇರಿ ಅವರು ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿಯೇ ಇಂದು ಸಹಸ್ರಾರು ಸಂಖ್ಯೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದಾರೆ.

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಉಪಹಾರದ ನಂತರ ಪಿ.ಎಚ್.ನೀರಲಕೇರಿ ಹಾಗೂ ದಾನಪ್ಪ ಕಬ್ಬೇರ ಬೆಂಬಲಿಗರು ದಾವಣಗೆರೆಯತ್ತ ತೆರಳಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/08/2022 03:53 pm

Cinque Terre

62.06 K

Cinque Terre

3

ಸಂಬಂಧಿತ ಸುದ್ದಿ