ಹುಬ್ಬಳ್ಳಿ: ಉತ್ತರ ಕರ್ನಾಟಕದ ಕ್ಯಾನ್ಸರ್ ರೋಗಿಗಳ ಪಾಲಿನ ಸಂಜೀವಿನಿಯಾಗಿರುವ ನವನಗರದ ಕರ್ನಾಟಕ ಕ್ಯಾನ್ಸರ್ ಥೆರಪಿ ಹಾಗೂ ಸಂಶೋಧನಾ ಸಂಸ್ಥೆಗೆ ರಾಜ್ಯ ಸರ್ಕಾರ 10 ಕೋಟಿ ಆರ್ಥಿಕ ನೆರವು ಬಿಡುಗಡೆ ಮಾಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಸ್ಪತ್ರೆಯ ಚೇರಮನ್ ಡಾ.ಬಿ.ಆರ್. ಪಾಟೀಲ, ಕ್ಯಾನ್ಸರ್ ಥೆರಪಿ ಸಂಸ್ಥೆಯ ಅಧ್ಯಕ್ಷ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ, ಚೇರ್ಮನ್ ಡಾ. ಬಿ.ಆರ್. ಪಾಟೀಲ, ನಿರ್ದೇಶಕ ಮಹೀಂದ್ರ ಸಿಂಘಿ ಹಾಗೂ ಅನಿತಾ ಪಾಟೀಲ ಅವರನ್ನೊಳಗೊಂಡ ನಿಯೋಗ ಆಸ್ಪತ್ರೆಯ ನವೀಕರಣ ಹಾಗೂ ಅತ್ಯಾಧುನಿಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿತ್ತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಅವರು ಬಜೆಟ್‌ನಲ್ಲಿ ನೆರವು ನೀಡುವ ಭರವಸೆ ನೀಡಿದ್ದರು. ಈಗ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಆ. 1ರಂದು ನೆರವು ಕ್ಯಾನ್ಸರ್ ಸಂಸ್ಥೆಯ ಖಾತೆಗೆ ಜಮಾ ಆಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯು ಕಳೆದ 45 ವರ್ಷಗಳಿಂದ ಸುಮಾರು 10ಕ್ಕಿಂತಲೂ ಹೆಚ್ಚು ಜಿಲ್ಲೆಗಳ ಬಡರೋಗಿಗಳ ಆಶಾಕಿರಣ ವಾಗಿದೆ.
ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಇಎಸ್‌ಐ, ರೇಲ್ವೆ, ಇಸಿಎಚ್‌ಎಸ್ ಯೋಜನೆಯಡಿ ಪ್ರತಿ ತಿಂಗಳು ಸುಮಾರು 200ಕ್ಕೂ ಹೆಚ್ಚು ಬಡ ರೋಗಿಗಳು ಹಾಗೂ ವರ್ಷಕ್ಕೆ 2,000 ಬಡರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ದೊರೆಯುವ ಉದ್ದೇಶದಿಂದ ನೆರವು ನೀಡಲಾಗಿದೆ. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಹಾಗೂ ಈ ಭಾಗದ ಎಲ್ಲ ಜನಪ್ರತಿನಿಧಿಗಳಿಗೆ ಕೃತಜ್ಞತೆ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/08/2022 10:34 pm