ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೆಲೆ ಏರಿಕೆ ವಿರುದ್ಧ ಮತ್ತೆ ಪ್ರತಿಭಟನೆಗಿಳಿದ ಕಾಂಗ್ರೆಸ್

ಧಾರವಾಡ: ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಧಾರವಾಡ ಜಿಲ್ಲಾ ಕಾಂಗ್ರೆಸ್ ಮತ್ತೆ ಪ್ರತಿಭಟನೆಗಿಳಿದಿದೆ. ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಎಲ್‌ಪಿಜಿ ಗ್ಯಾಸ್, ಪೆಟ್ರೋಲ್, ಡೀಸೆಲ್ ದರವಷ್ಟೇ ಅಲ್ಲ, ಮೊಸರು, ಹಾಲು ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳ ಬೆಲೆಯನ್ನು ಸರ್ಕಾರ ಹೆಚ್ಚಳ ಮಾಡಿರುವುದಲ್ಲದೇ ಅವುಗಳ ಮೇಲೆ ಜಿಎಸ್‌ಟಿಯನ್ನೂ ಹೇರಿಕೆ ಮಾಡಿದೆ. ಇದರಿಂದ ಬಡವರ ಬದುಕು ದುಸ್ತರವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

ಬೆಲೆ ಏರಿಕೆ ನಿಯಂತ್ರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಮಕ್ಕಳು, ಬಡವರ ತಿನ್ನುವ ಪದಾರ್ಥಗಳ ಮೇಲೂ ಜಿಎಸ್‌ಟಿ ಹೇರಿ ಸರ್ಕಾರ ತನ್ನ ಉದ್ಧಟತನ ಪ್ರದರ್ಶಿಸುತ್ತಿದೆ. ಹೀಗಾಗಿ ಸರ್ಕಾರ ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಬರುವ ದಿನಗಳಲ್ಲಿ ಸರ್ಕಾರ ಬಿಜೆಪಿಗೆ ತಕ್ಕ ಪಾಠ ಕಲಿಸುವುದಂತೂ ಸುಳ್ಳಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಸಿದರು.

Edited By : Shivu K
Kshetra Samachara

Kshetra Samachara

05/08/2022 12:49 pm

Cinque Terre

18.96 K

Cinque Terre

0

ಸಂಬಂಧಿತ ಸುದ್ದಿ