ಧಾರವಾಡ: ಕಲಘಟಗಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಬಗರಹುಕುಂ ಸಾಗುವಳಿದಾರರಿದ್ದು, ಅವರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಎಐಕೆಕೆಎಂಎಸ್ ಸಂಘಟನೆ ನೇತೃತ್ವದಲ್ಲಿ ಸಾಗುವಳಿದಾರರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಲವಾರು ವರ್ಷಗಳಿಂದ ಸರ್ಕಾರಿ ಭೂಮಿಯನ್ನು ಉಳುಮೆ ಮಾಡುತ್ತಿರುವ ಸಾಗುವಳಿದಾರರಿಗೆ ಅದೇ ಆಸರೆಯಾಗಿದೆ. ಹೀಗಾಗಿ ಈ ಜಮೀನಿಗೆ ಹಕ್ಕು ಪತ್ರ ನೀಡಲು ಅರ್ಜಿ ಸಲ್ಲಿಸಬೇಕಾಗಿದೆ. ಈ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ಅಲ್ಲದೇ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಲಾಯಿತು.
Kshetra Samachara
06/08/2022 04:24 pm