ಧಾರವಾಡ: ಕರ್ನಾಟಕ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಬಿಜೆಪಿ ಹಿರಿಯ ಮುಖಂಡ ತವನಪ್ಪ ಅಷ್ಟಗಿ ನೇಮಕವಾಗಿದ್ದಾರೆ.
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ತವನಪ್ಪ ಅಷ್ಟಗಿಯವರು, ಮೂಲತಃ ಕೃಷಿಕರು. ಒಂದು ಅವಧಿಗೆ ಜಿಲ್ಲಾ ಪಂಚಾಯತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಧಾರವಾಡ-71 ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಲವರ್ಧನೆಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿರುವ ಅವರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ.
ಕ್ಷೇತ್ರದಾದ್ಯಂತ ಜನಾನುರಾಗಿ ಮುಖಂಡರು ಆದ ಅಷ್ಟಗಿಯವರು ಕರ್ನಾಟಕ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿರುವುದಕ್ಕೆ ಬಿಜೆಪಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ.
Kshetra Samachara
07/08/2022 10:17 pm