ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅ.10ಕ್ಕೆ ನವಲಗುಂದದಲ್ಲಿ ನಡೆಯಲಿರುವ ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಲಿರುವ ಸಿದ್ದರಾಮಯ್ಯ

ನವಲಗುಂದ : 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಬುಧವಾರ ನವಲಗುಂದ ಪಟ್ಟಣದಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ಚಾಲನೆ ನೀಡಲಿದ್ದಾರೆ.

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬುಧವಾರ ಆಗಸ್ಟ್ 10 ರಂದು ಬೆಳಿಗ್ಗೆ 8 ಗಂಟೆಗೆ ನವಲಗುಂದ ನಗರದ ಲಿಂಗರಾಜ ವೃತ್ತದಿಂದ ಚಾಲನೆ ನೀಡಲಿದ್ದಾರೆ ಎಂದು ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಉಪಾಧ್ಯಕ್ಷರು, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಧಾರವಾಡ ಜಿಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನೀಲಕುಮಾರ ಪಾಟೀಲ, ನವಲಗುಂದ ಮಾಜಿ ಶಾಸಕರಾದ ಎನ್.ಹೆಚ್. ಕೋನರಡ್ಡಿ, ಮಾಜಿ ಸಚಿವರಾದ ಕೆ.ಎನ್. ಗಡ್ಡಿ, ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಕೆಪಿಸಿಸಿ ಸದಸ್ಯ ವಿಜಯ ಕುಲಕರ್ಣಿ, ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಾಪುಗೌಡ ಪಾಟೀಲ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೆಗೌಡ ಪಾಟೀಲ, ಉಪಾಧ್ಯಕ್ಷ ಶಿವನಂದ ಕರಿಗಾರ ಹಾಗೂ ಪಕ್ಷದ ಜಿಲ್ಲಾ ಪಂಚಾಯತ, ತಾಲ್ಲೂಕು ಪಂಚಾಯತ, ಪುರಸಭೆ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು ಸೇರಿದಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಭಾಗವಹಿಸುವರು.

Edited By : PublicNext Desk
Kshetra Samachara

Kshetra Samachara

09/08/2022 08:47 pm

Cinque Terre

6.94 K

Cinque Terre

0

ಸಂಬಂಧಿತ ಸುದ್ದಿ