ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ; ಇದೊಂದು ಸುಳ್ಳು ಸುದ್ದಿ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂಬುದು ಕೇವಲ ಮಾಧ್ಯಮದ ಸೃಷ್ಠಿ ಎಂದರು.

ಸಾರ್ವಜನಿಕ ಸ್ಥಳದಲ್ಲಿ ಧ್ವಜಾರೋಹಣ ಮಾಡಲು ಬಿಡೋದಿಲ್ಲ ಎಂಬ ಹೇಳಿಕೆ ನೀಡಿರುವ ಜಮೀರ್ ಅಹ್ಮದ್ ಅವರು ಇದೇ ರೀತಿ ಹೇಳಿಕೆ ನೀಡುತ್ತ ಶಾಂತಿ ಕದಡುವ ಕೆಲಸ ಮಾಡುತ್ತ ಬಂದಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಇದನ್ನೇ ಮಾಡುತ್ತ ಬಂದಿವೆ. ಜಮೀರ್ ಅಹ್ಮದ್ ಮೇಲೆ ಸರ್ಕಾರ ಸೂಕ್ತ ಸಂದರ್ಭದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/08/2022 12:29 pm

Cinque Terre

28.55 K

Cinque Terre

2

ಸಂಬಂಧಿತ ಸುದ್ದಿ