ಹುಬ್ಬಳ್ಳಿ: ಹು-ಧಾ ಪಾಲಿಕೆಯಿಂದ ರಾಷ್ಟ್ರಧ್ವಜ ಲೋಪ ಹಿನ್ನೆಲೆಯಲ್ಲಿ, ಈ ಬಗ್ಗೆ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಪವಾದ ಧ್ವಜಗಳನ್ನ ಪರಿಶೀಲನೆ ಮಾಡದೇ ಸ್ವೀಕಾರ ಮಾಡಲಾಗಿದೆ. ಈ ರೀತಿ ಲೋಪ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು. ಹಾಗೇರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಆ ತರಹದ ಯಾವುದೇ ಪ್ರಶ್ನೆ ಇಲ್ಲ. ಅಧಿಕಾರ ವಲಯದಲ್ಲಿ ಅಸ್ಥಿರತೆ ಕಾಪಾಡಬೇಕು. ಸಿಎಂ ವಿಚಾರದಲ್ಲಿ ಜಗದೀಶ್ ಶೆಟ್ಟರ್ ಹೆಸರು ಯಾರು ಮುನ್ನೆಲೆಗೆ ತಂದಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ರಾಷ್ರ್ಟ್ರೀಯ ನಾಯಕತ್ವದಲ್ಲಿಯೂ ಯಾವುದೇ ಚರ್ಚೆ ಇಲ್ಲ ಎಂದರು.
ಇನ್ನು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗಾಗಿ ಹಿಂದೂ ಸಂಘಟನೆಗಳ ಹೋರಾಟ ವಿಚಾರವಾಗಿ, ಈದ್ಗಾ ಮೈದಾನ ಪಾಲಿಕೆ ವ್ಯಾಪ್ತಿಯಲ್ಲಿದೆ. ಈ ವಿಚಾರದಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸ್ವತಂತ್ರ ಅಧಿಕಾರ ಇದೆ. ಇದರ ಬಗ್ಗೆ ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅವರಿಗೆ ಬಿಟ್ಟ ವಿಚಾರ. ಧಾರ್ಮಿಕ ಆಚರಣೆ ವಿಚಾರವಾಗಿ ಸುಪ್ರೀಂಕೋರ್ಟ್ ನಿಂದಲೇ ಆದೇಶವಿದೆ. ಹೀಗಾಗಿ ಪಾಲಿಕೆ ಅಧಿಕಾರಿಗಳು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
Kshetra Samachara
12/08/2022 02:13 pm