ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಪಂಜಿನ ಮೆರವಣಿಗೆ: ಕೇಂದ್ರ ಸಚಿವ ಜೋಶಿ ಭಾಗಿ

ಧಾರವಾಡ: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದಲ್ಲಿ ಬಿಜೆಪಿಯಿಂದ ಶುಕ್ರವಾರ ರಾತ್ರಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಧಾರವಾಡದ ಕಲಾಭವನದಿಂದ ಪಂಜಿನ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಮೆರವಣಿಗೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮೇಯರ್ ಈರೇಶ ಅಂಚಟಗೇರಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಕಲಾಭವನದಿಂದ ಆರಂಭಗೊಂಡ ಈ ಮೆರವಣಿಗೆ ಸುಭಾಷ ರಸ್ತೆಯ ಬಿಜೆಪಿ ಕಚೇರಿವರೆಗೆ ಸಾಗಿ ಅಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯುದ್ದಕ್ಕೂ ಭಾರತ ಮಾತಾ ಕೀ ಜೈ ಎನ್ನುವ ಘೋಷಣೆಗಳು ಮೊಳಗಿದವು.

Edited By : Manjunath H D
Kshetra Samachara

Kshetra Samachara

13/08/2022 07:42 am

Cinque Terre

25.51 K

Cinque Terre

0

ಸಂಬಂಧಿತ ಸುದ್ದಿ