ಹುಬ್ಬಳ್ಳಿ: ರಾಜಸ್ಥಾನದಲ್ಲಿ ಶಿಕ್ಷಕನ ಥಳಿತದಿಂದ ದಲಿತ ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಎಸ್‌ಸಿ ಮೋರ್ಚಾದಿಂದ ಪ್ರತಿಭಟನೆ ಮಾಡಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಶೀಲ್ದಾರ ಕಛೇರಿವರೆಗೆ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜಾಸ್ಥಾನ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ರಾಜಸ್ಥಾನ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
18/08/2022 06:11 pm