ನವಲಗುಂದ : ಸಿದ್ದರಾಮಯ್ಯನವರ ವಾಹನದ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮೊಟ್ಟೆ ಎಸೆದು ಅಗೌರವ ತೋರಿದ ಪ್ರಕರಣದ ವಿಚಾರಕ್ಕೆ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿಗಾಗಿ ತೆರಳಿದ್ದ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಾಹನದ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮೊಟ್ಟೆ ಎಸೆದು ಅಗೌರವ ಮಾಡಿದ ಕ್ರಮದ ವಿರುದ್ಧ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಪಟ್ಟಣದ ಲಿಂಗರಾಜ್ ಸರ್ಕಲ್ನಲ್ಲಿ ರಸ್ತೆ ತಡೆದು ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತಹಶೀಲ್ದಾರ ಕಚೇರಿಗೆ ತೆರಳಿ ಅವರ ಮೂಲಕ ರಾಜ್ಯ ಪಾಲರಿಗೆ ಸಂವಿಧಾನ ವಿರೋಧಿ ಕ್ರಮ ಮಾಡುತ್ತಿರುವ ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಶುಕ್ರವಾರ ರಾಜ್ಯ ಪಾಲರಿಗೆ ಮನವಿ ಸಲ್ಲಿಸಲಾಯಿತು.
Kshetra Samachara
19/08/2022 07:15 pm