ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವೀರ ಸಾವರ್ಕರ್ ಭಾವಚಿತ್ರ ದಹಿಸಿದ ಕಾಂಗ್ರೆಸ್: ಫೋಟೋ ಮೇಲೆ ಮೊಟ್ಟೆ ಒಡೆದು ಅವಮಾನ

ಧಾರವಾಡ: ವೀರ ಸಾವರ್ಕರ್ ಭಾವಚಿತ್ರದ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರಕ್ಕೆ ಮತ್ತೆ ಅಪಮಾನ ಮಾಡಿದ್ದಾರೆ.

ಪ್ರತಿಭಟನೆ ನೆಪದಲ್ಲಿ ಸಾವರ್ಕರ್ ಅವರ ಭಾವಚಿತ್ರ ದಹಿಸಿ, ಆ ಫೋಟೋ ಮೇಲೆ ಮೊಟ್ಟೆ ಒಡೆದು ಆಕ್ರೋಶ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಾವರ್ಕರ್ ಅವರ ಭಾವಚಿತ್ರವನ್ನು ಬೂಟುಗಾಲಿನಿಂದ ತುಳಿದು ಅದರ ಜೊತೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಭಾವಚಿತ್ರ ಹಾಗೂ ಪ್ರತಿಕೃತಿಯನ್ನೂ ದಹಿಸಿ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಕೊಡಗಿನಲ್ಲಿ ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಒಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಬಂದ ಕಾರ್ಯಕರ್ತರು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಪ್ರತಿಕೃತಿ ದಹಿಸಿದರು. ಈ ವೇಳೆ ವೀರ ಸಾವರ್ಕರ್ ಅವರ ಭಾವಚಿತ್ರವನ್ನೂ ಸುಟ್ಟು, ಅದರ ಮೇಲೆ ಮೊಟ್ಟೆ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/08/2022 08:21 pm

Cinque Terre

90.62 K

Cinque Terre

100

ಸಂಬಂಧಿತ ಸುದ್ದಿ