ಧಾರವಾಡ: ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಫೋಟೋ ಸುಟ್ಟಿದ್ದನ್ನು ಖಂಡಿಸಿ ಧಾರವಾಡದ ಉಪನಗರ ಠಾಣೆಯ ಮುಂಭಾಗದ ಬೆಳಗಾವಿ ರಸ್ತೆ ಬಂದ್ ಮಾಡಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೂರು ದಾಖಲಾಗುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದ್ದಿದ್ದಾರೆ.
ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಕೂಡ ಆಗಮಿಸಿದ್ದು, ಪ್ರತಿಭಟನೆ ಕೈ ಬಿಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಆದರೆ, ಕಾರ್ಯಕರ್ತರು ಪಟ್ಟು ಬಿಡದೇ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆಯೋ ಕಾದು ನೋಡಬೇಕಿದೆ.
Kshetra Samachara
19/08/2022 10:56 pm