ನವಲಗುಂದ : ನವಲಗುಂದ ಪಟ್ಟಣಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಸನ್ಮಾನಿಸಿ, ಸ್ವಾಗತಿಸಲಾಯಿತು.
ಸನ್ಮಾನ ಸ್ವೀಕರಿಸಿದ ನಂತರ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಅವರು ರೈತ ಭವನ ಹತ್ತಿರದ ವೀರಗಲ್ಲಿಗೆ ಹಾಗೂ ಶ್ರೀ ಶಿರಸಂಗಿ ಲಿಂಗರಾಜರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಕೆ.ಎನ್ ಗಡ್ಡಿ, ಮಾಜಿ ಶಾಸಕ ಎನ್.ಹೆಚ್ ಕೋನರಡ್ಡಿ, ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ ಹಿರೆಗೌಡರ, ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ ಸೇರಿದಂತೆ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
20/08/2022 11:56 am