ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಹುಬ್ಬಳ್ಳಿ ಕೈ,ಕಮಲ ಕಾರ್ಯಕರ್ತರ ಮಧ್ಯೆ ಪೈಪೋಟಿಯ ಪ್ರತಿಭಟನೆ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೈ,ಕಮಲ ಕಾರ್ಯಕರ್ತರು ಪೈಪೋಟಿ ಮೇಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರಿಗೆ ಕೈ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಪ್ರತಿಭಟನೆ ಬಿಸಿ ಹೆಚ್ಚಿದೆ.

ಕಾಂಗ್ರೆಸ್ ಬಂಟರ್ಸ್ ಹರಿದು ಹಾಕಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಇದರಿಂದ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದೆ.

ಇನ್ನು ಪೊಲೀಸರಿಗೂ ಬಗ್ಗದ ಎರಡು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಒಂದು ಕಡೆ ಬಿಜೆಪಿ ಕಾರ್ಯಕರ್ತರು ಜೈ ಮೋದಿ ಎಂದರೆ ಇನ್ನೊಂದಡೆ ಕೈ ಕಾರ್ಯಕರ್ತರು ಜೈ ಕಾಂಗ್ರೆಸ್ ಎನ್ನುತ್ತಿದ್ದಾರೆ.

ಇದೇ ವೇಳೆ ಹುಬ್ಬಳ್ಳಿಗೆ KPCC ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ.

ಸದ್ಯ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಜೋರಾಗಿದೆ. ಇನ್ನು

ನಿನ್ನೆ ಧಾರವಾಡದಲ್ಲಿ ಕೈ ಕಾರ್ಯಕರ್ತರು ವೀರ ಸಾವರ್ಕರ್ ಅವರ ಭಾವ ಚಿತ್ರ ಸುಟ್ಟ ಹಿನ್ನೆಲೆಯಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಪ್ರತಿಭಟನೆ ತೀವ್ರತೆ ಹೆಚ್ಚುತ್ತಿದ್ದಂತೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/08/2022 01:00 pm

Cinque Terre

92.21 K

Cinque Terre

14

ಸಂಬಂಧಿತ ಸುದ್ದಿ