ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಿದ್ದರಾಮಯ್ಯನವರ ಹೆಸರು ಕೆಡಿಸಲು ಬಿಜೆಪಿ ವ್ಯವಸ್ಥಿತ ಪ್ಲ್ಯಾನ್; ಎಂ.ಬಿ. ಪಾಟೀಲ್

ಧಾರವಾಡ: ಸಿದ್ದರಾಮೋತ್ಸವದಲ್ಲಿ ಜನ ಸೇರಿದ್ದನ್ನು ನೋಡಿ ಬಿಜೆಪಿಯವರಿಗೆ ನಡುಕ ಶುರುವಾಗಿದೆ. ಹೀಗಾಗಿ ಸಿದ್ದರಾಮಯ್ಯನವರ ಹೆಸರು ಕೆಡಿಸಲು ಬಿಜೆಪಿ ವ್ಯವಸ್ಥಿತ ಪ್ಲ್ಯಾನ್ ಮಾಡುತ್ತಿದೆ ಎಂದು ಶಾಸಕ ಎಂ.ಬಿ.ಪಾಟೀಲ್ ಹೇಳಿದರು.

ಧಾರವಾಡದ ಮುರುಘಾಮಠಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಸಿದ್ದರಾಮಯ್ಯನವರನ್ನು ಬಯಸುತ್ತಿದ್ದಾರೆ. ಅವರು ಒಳ್ಳೆಯ ಸರ್ಕಾರ ಕೊಟ್ಟಿದ್ದಾರೆ. ಹೀಗಾಗಿ ಅವರ ಹೆಸರು ಕೆಡಿಸುವುದಕ್ಕೋಸ್ಕರ ಅವರ ಮೇಲೆ ಮೊಟ್ಟೆ ಎಸೆಯುವ ಕೆಲಸಕ್ಕೆ ಬಿಜೆಪಿ ಕೈ ಹಾಕಿದೆ ಎಂದರು.

ಮೊಟ್ಟೆ ಎಸೆಯುವುದು ದೊಡ್ಡ ಕೆಲಸವಲ್ಲ. ಅದನ್ನು ನಾವೂ ಮಾಡಬಹುದು. ಅದು ನಮ್ಮ ಸಂಸ್ಕೃತಿ ಅಲ್ಲ ಎಂದರು.

ಧಾರವಾಡದಲ್ಲಿ ಸಾವರ್ಕರ್ ಭಾವಚಿತ್ರ ಸುಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಇಲ್ಲದೇ ಇರುವವರ ಮೇಲೂ ಕೇಸ್ ಹಾಕಲಾಗಿದೆ. ಸಾವರ್ಕರ್ ಏನೇ ಇರಲಿ, ಅವರ ಬಗ್ಗೆ ನಮ್ಮ ನಿಲುವು ಸ್ಪಷ್ಟ. ಅವರು ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಅದು ಇತಿಹಾಸದಲ್ಲಿ ಉಳಿದಿದೆ. ಆದರೆ, ಅವರ ಭಾವಚಿತ್ರ ಸುಡುವುದು ತಪ್ಪು. ಅದು ಆ್ಯಕ್ಷನ್ ಮತ್ತು ರಿಯಾಕ್ಷನ್‌ಗೆ ಕಾರಣವಾಗುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ಸಿಎಂ ಹಾಗೂ ಗೃಹ ಮಂತ್ರಿಗಳ ಕೈಯಲ್ಲಿದೆ. ಈ ಸರ್ಕಾರ ರಾಜ್ಯದಲ್ಲಿ ಸರ್ವನಾಶವಾಗಿದೆ ಎಂದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/08/2022 10:13 pm

Cinque Terre

54.86 K

Cinque Terre

6

ಸಂಬಂಧಿತ ಸುದ್ದಿ