ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ: ಪಾಲಿಕೆಯಲ್ಲೊಂದು ಮಹತ್ವದ ನಿರ್ಧಾರ...!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆದಿದ್ದು, ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳು ಕೂಡ ಅವಿರೋಧವಾಗಿ ಆಯ್ಕೆಯಾಗಿದೆ.

ಹೌದು.. ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿಗೆ ಶಿವಾನಂದ ಮೆಣಸಿನಕಾಯಿ ಅವಿರೋಧ ಆಯ್ಕೆಯಾಗಿದ್ದು, ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿಗೆ ವಿಜಯಾನಂದ ಶೆಟ್ಟಿ, ಶಿಕ್ಷಣ, ಸಾಮಾಜಿಕ‌ ನ್ಯಾಯ ಹಾಗೂ ಆರೋಗ್ಯ ಸ್ಥಾಯಿ‌ ಸಮಿತಿಗೆ ಸುರೇಶ ಪಕ್ಕಿರಪ್ಪ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗೆ ಒಂದು ನಾಮಪತ್ರ ರಾಧಾಬಾಯಿ‌ ಸಫಾರೆ ಅವಿರೋಧವಾಗಿ‌ ಆಯ್ಕೆಯಾಗಿದ್ದಾರೆ.

ಈಗಾಗಲೇ ಸಾಕಷ್ಟು ವಿಳಂಬವನ್ನು ಅನುಭವಿಸಿದ್ದ ಮಹಾನಗರ ಪಾಲಿಕೆಗೆ ಈಗ ಒಂದು ರೀತಿಯಲ್ಲಿ ಸುಧಾರಣೆ ಕಾಣುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ವ್ಯವಸ್ಥೆ ಸುಧಾರಿಸುವ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಯನ್ನು ನೀಡಬೇಕಿದೆ.

Edited By : Nagaraj Tulugeri
Kshetra Samachara

Kshetra Samachara

23/08/2022 03:11 pm

Cinque Terre

37.56 K

Cinque Terre

1

ಸಂಬಂಧಿತ ಸುದ್ದಿ