ಧಾರವಾಡ: ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ದುರಹಂಕಾರದ ಪರಮಾವಧಿಯಾಗುತ್ತಿದೆ. ನಾಯಕರ ಅಧಿಕಾರ ಮುಗಿದಾಗ ಆ ಸ್ಥಾನ ಬಿಟ್ಟುಕೊಡಬೇಕು ಆದರೆ, ಕಾಂಗ್ರೆಸ್‌ನಲ್ಲಿ ಹಾಗಾಗುತ್ತಿಲ್ಲ. ಅದಕ್ಕಾಗಿಯೇ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅನೇಕ ಹಿರಿಯರು ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ. ಗುಲಾಂ ನಬಿ ಆಜಾದ್ ಅವರೂ ಈಗ ಪಕ್ಷ ಬಿಟ್ಟು ಹೊರ ಬಂದಿದ್ದಾರೆ ಎಂದರು.
ಬಿಜೆಪಿ ರಾಜ್ಯ ಅಧ್ಯಕ್ಷರು ಬದಲಾಗುತ್ತಿದ್ದಾರೆ ಎಂಬ ಸುದ್ದಿಯನ್ನು ಮಾಧ್ಯಮಗಳೇ ಹಬ್ಬಿಸುತ್ತಿವೆ. ಸಾಮಾನ್ಯವಾಗಿ ನಮ್ಮಲ್ಲಿ ರಾಜ್ಯಾಧ್ಯಕ್ಷರ ಸ್ಥಾನ ಮೂರು ವರ್ಷದ ಅವಧಿಗೆ ಮೀಸಲಾಗಿರುತ್ತದೆ. ಮೂರು ವರ್ಷದ ಬಳಿಕವೂ ಬದಲಾವಣೆ ಮಾಡಲೇಬೇಕು ಅಂತೇನಿಲ್ಲ. ರಾಜ್ಯಾಧ್ಯಕ್ಷರು ಬದಲಾಗುತ್ತಾರೆ ಎಂದು ಮಾಧ್ಯಮಗಳೇ ಕಾರಣಿಕ ನುಡಿದಂತೆ ಹೇಳುತ್ತಿವೆ. ನಮ್ಮಲ್ಲಿ ಆ ರೀತಿ ಯಾವುದೇ ಚರ್ಚೆಯಾಗಿಲ್ಲ ಎಂದರು.
ಯಡಿಯೂರಪ್ಪ ದೆಹಲಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಡಿಯೂರಪ್ಪ ಈ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು. ಸದಸ್ಯರಾಗಿ ನೇಮಕವಾದ ಬಳಿಕ ನಾಯಕರ ಭೇಟಿಗೆ ದೆಹಲಿಗೆ ಹೋಗಿದ್ದರು ಎಂದರು.
ಚಿತ್ರದುರ್ಗದ ಮುರುಘಾ ಶ್ರೀಗಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಸ್ವಾಮೀಜಿ ನಾಡಿ ಪ್ರತಿಷ್ಠಿತ ವ್ಯಕ್ತಿಗಳಿದ್ದಾರೆ. ಸೂಕ್ತ ಹಾಗೂ ನ್ಯಾಯಯುತ ತನಿಖೆಯಾಗಬೇಕು. ಈಗ ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕಾಗಿಲ್ಲ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/08/2022 02:26 pm