ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ನಿರ್ಧಾರ ಸ್ವಾಗತಾರ್ಹ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆಯಿಂದ ಅವಕಾಶ ಹಿನ್ನೆಲೆ ಪಾಲಿಕೆ ಒಳ್ಳೆಯ ನಿರ್ಣಯ ತೆಗೆದುಕೊಂಡಿದ್ದಾರೆ. ಪಾಲಿಕೆಯ ನಿರ್ಣಯವನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಸಭೆಯ ಬಳಿಕ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸೌಹಾರ್ದತೆಯಿಂದ ಗಣೇಶೋತ್ಸವ ಆಚರಣೆ ಮಾಡುವುದು ಸೂಕ್ತ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ಎಡಿಜಿಪಿಗೆ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸಹ ನಾನು ಸೂಕ್ತ ಸಲಹೆ ನೀಡಿದ್ದೇನೆ ಎಂದರು.

ಈಗಾಗಲೇ ಎಲ್ಲಾ ರೀತಿಯ ಕಾನೂನು ಸುವ್ಯವಸ್ಥೆ ಆಗಿದೆ. ಎಡಿಜಿಪಿ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಭದ್ರತೆ ಕಾರ್ಯ ನಡೆಯುತ್ತಿದೆ. ಗಣೇಶ ಹಬ್ಬವನ್ನು ಸೌಹಾರ್ದತೆಯಿಂದ ಮಾಡೋಣ. ಇದರಿಂದ ಕಳೆದುಕೊಳ್ಳುವುದೇನೂ ಇಲ್ಲ. ಎಲ್ಲಾ ಶಾಸಕರು, ಸದಸ್ಯರು, ಅಧಿಕಾರಿಗಳ ಗಮನಕ್ಕೆ ತಂದು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಜನ ಯಾವುದೇ ಉದ್ವೇಗಕ್ಕೆ ಒಳಗಾಗದೇ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಅವರು ಮನವಿ ಮಾಡಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/08/2022 08:59 pm

Cinque Terre

97.45 K

Cinque Terre

7

ಸಂಬಂಧಿತ ಸುದ್ದಿ