ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನ ಸಾರ್ವಜನಿಕರ ಸ್ವತ್ತು. ಯಾವುದೇ ರೀತಿಯಾದ ಪೂಜಾ ಸ್ಥಳವಲ್ಲ. ಇಲ್ಲಿ ಅನೇಕ ರೀತಿಯ ಚಟುವಟಿಕೆಗಳು ನಡೆಯುತ್ತವೆ. ವರ್ಷಕ್ಕೆ ಎರಡು ಬಾರಿ ನಮಾಜ್ ಮಾಡಲು ಸುಪ್ರೀಂ ಕೋರ್ಟ್ ಆದೇಶ ಕೊಟ್ಟಿದೆ. ಅದನ್ನು ಬಿಟ್ಟರೆ ಉಳಿದೆಲ್ಲ ಸಮಯದಲ್ಲಿ ಈದ್ಗಾ ಮೈದಾನ ಕಾರ್ಪೋರೇಷನ್‌ಗೆ ಸೇರಿದ್ದು. ಹಾಗಾಗಿ ಇಲ್ಲಿ ಯಾವುದೇ ಸಮಸ್ಯೆ ಬರಬಾರದಿತ್ತು. ಆದರೆ ಕೆಲವರು ಅದರಲ್ಲೂ ವಿಶೇಷವಾಗಿ ಕೆಲವು ರಾಜಕೀಯ ಪಕ್ಷಗಳು ಇದನ್ನು ವಿರೋಧ ಮಾಡಿದ್ದವು. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.
ಇನ್ನೂ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುತ್ತಿರುವ ಸಂಘಟಕರು ಹಾಕಿರುವ ಷರತ್ತುಗಳನ್ನು ಪಾಲಿಸಿ ಹಬ್ಬ ಆಚರಣೆ ಮಾಡಬೇಕು. ಯಾವುದೇ ರೀತಿಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು. ಇದರ ಜೊತೆಗೆ ಗಣೇಶೋತ್ಸವ ಹೊರತುಪಡಿಸಿ ಇನ್ನುಳಿದ ಕಾರ್ಯಕ್ರಮ ನಡೆಯುವಾಗಲೂ ಯಾರು ವಿರೋಧ ಮಾಡಬಾರದು ಎಂದರು.
Kshetra Samachara
31/08/2022 10:24 am