ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ, ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕೋರ್ಟ್ ಅನುಮತಿ ನೀಡಿದೆ. ಯಾರೂ ತಕರಾರು ಮಾಡದೇ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ರಾಣಿ ಚೆನ್ನಮ್ಮ, ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗಣೇಶ ಹಬ್ಬ ವಿಜೃಂಬಣೆಯಿಂದ ನಡೆಯುತ್ತಿರುವುದು ಸಂತಸ ತಂದಿದೆ. ಕೋವಿಡ್‌ನಲ್ಲಿ ಸಮಯದಲ್ಲಿ ಆಚರಣೆ ಮಾಡರಲಿಲ್ಲ. ಆದರೆ ಈಗ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.
ಅಂಜುಮನ್ ಸಂಸ್ಥೆ ಸುಪ್ರೀಂ ಕೋರ್ಟ್ ಮೋರೆ ಹೋಗಿರುವ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಕೋರ್ಟ್ ತೀರ್ಪು ಕೊಟ್ಟಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ತೊಂದರೆ ಇಲ್ಲ. ಕಾನೂನು ವ್ಯಾಪ್ತಿಯಲ್ಲಿ ಪ್ರತಿಷ್ಠಾಪಣೆ ಮಾಡಲಾಗಿದೆ ಎಂದರು.
Kshetra Samachara
31/08/2022 03:22 pm