ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ತಾರಿಹಾಳ ಬೆಂಕಿ ದುರಂತ ನೊಂದವರಿಗೆ ಅನ್ಯಾಯ ಆಗಲು ಬಿಡುವುದಿಲ್ಲ; ಸಚಿವ ಹಾಲಪ್ಪ ಆಚಾರ್ಯ

ಹುಬ್ಬಳ್ಳಿ: ತಾರಿಹಾಳದ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅನಾಹುತ ಘಟನಾ ಸಂಬಂಧ ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿತ್ತು. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಚರ್ಚಿಸಿದ್ದೇನೆ.‌ ಈ ಬಗ್ಗೆ ಸುಳ್ಳು ಹೇಳುವ ಅವಶ್ಯಕತೆ ನಮಗಿಲ್ಲ, ಆದಷ್ಟು ಬೇಗ ಪರಿಹಾರ ಒದಗಿಸುವ ಕೆಲಸವನ್ನು ಮಾಡಲಾಗುವುದು ಎಂದು ಹಾಲಪ್ಪ ಆಚಾರ್ಯ ತಿಳಿಸಿದರು.

ಪರಿಹಾರ ನೀಡುವಲ್ಲಿ ಯಾಕೆ ವಿಳಂಬ ಆಗಿದೆ ಎಂಬುದನ್ನು ನಾಳೆ ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ತಕ್ಷಣ ಕೊಡುವ ಕೆಲಸ ಮಾಡುತ್ತೇನೆ. ಸರ್ಕಾರ ನೊಂದವರ ಪರವಾಗಿರುವುದು ಹಾಗಾಗಿ ತನ್ನ ಜವಾಬ್ದಾರಿಯನ್ನು ಸರ್ಕಾರ ನಿಭಾಯಿಸುತ್ತದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

Edited By : Nagesh Gaonkar
Kshetra Samachara

Kshetra Samachara

31/08/2022 10:19 pm

Cinque Terre

22.02 K

Cinque Terre

0

ಸಂಬಂಧಿತ ಸುದ್ದಿ