ಧಾರವಾಡ: ಸೆ.2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ಇದರಿಂದ ಪ್ರಮುಖವಾಗಿ ಕರಾವಳಿ ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆಯುವ ಎರಡು ಪ್ರೊಜೆಕ್ಟ್‌ಗಳ ಉದ್ಘಾಟನೆಗೆ ಮೋದಿ ಬರಲಿದ್ದಾರೆ. ನಂತರ ಮೋದಿ ಅವರು ಬಹುದೊಡ್ಡ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಲಿದ್ದಾರೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/09/2022 01:38 pm