ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ!; ಸಮತಾ ಸೈನಿಕ ದಳ ಪ್ರತಿಭಟನೆ, ಎಚ್ಚರಿಕೆ

ಹುಬ್ಬಳ್ಳಿ: ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿ ಹಂಗರಗಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ, ನಗರದ ಮಿನಿ ವಿಧಾನ ಸೌಧದಲ್ಲಿಂದು ಸಮತಾ ಸೈನಿಕ ದಳ ಮತ್ತು ಭಾರತೀಯ ಮೂಲ ನಿವಾಸಿಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಂಗರಗಿ ಗ್ರಾಮದ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಕಟ್ಟಡದ ಗೋಡೆಯ ಮೇಲೆ ಚಿತ್ರಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಭಾನುವಾರದಂದು ಕಿಡಿಗೇಡಿಗಳು ಅಪಮಾನ ಮಾಡಿದ್ದು ಖಂಡನೀಯವಾಗಿದೆ.

ಇಂತಹ ಘಟನೆಗಳು ರಾಜ್ಯದಲ್ಲಿ ಪದೇ ಪದೆ ನಡೆಯುತ್ತಿದ್ದು, ಮುಖ್ಯಮಂತ್ರಿ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನೆ ಮಾಡಿ, ಎಲ್ಲ ಮಹಾತ್ಮರ ಪುತ್ಥಳಿ ಹಾಗೂ ಭಾವಚಿತ್ರಗಳಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಿದ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ಜಿಲ್ಲೆಯಿಂದ ಗಡೀಪಾರು ಮಾಡಬೇಕು. 7 ದಿನಗಳಲ್ಲಿ ಬಂಧಿಸದೇ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಸಂಘಟಿಸಲಾಗುವುದು ಎಂದು ದಲಿತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

05/09/2022 03:50 pm

Cinque Terre

15.33 K

Cinque Terre

0

ಸಂಬಂಧಿತ ಸುದ್ದಿ