ಹುಬ್ಬಳ್ಳಿ: ಮಳೆ ಹಾನಿ ವೀಕ್ಷಣೆ ಸಂದರ್ಭದಲ್ಲಿ ಮಹಿಳೆಯ ಜತೆ ದರ್ಪ ಪ್ರದರ್ಶಿಸಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುನಸಿಮರದ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಅರವಿಂದ ಲಿಂಬಾವಳಿ ಅವರ ಪ್ರತಿಕೃತಿ ಕೆಳಗೆ ಹಾಕಿ ತುಳಿದಿದ್ದಲದೇ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಲವಾಯಿ ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸಿಲ್ಲ. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಒತ್ತಾಯಿಸಿದರು.
Kshetra Samachara
05/09/2022 07:15 pm