ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿದ್ಯಾರ್ಥಿಗಳ ಧರಣಿಗೆ ಕೈ ಜೋಡಿಸಿದ ಶಾಸಕ ಅಬ್ಬಯ್ಯ, ಚಿಂಚೋರೆ

ಧಾರವಾಡ: ಲ್ಯಾಪ್‌ಟಾಪ್‌ಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳ ಧರಣಿಗೆ ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಸಾಥ್ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ವಿದ್ಯಾರ್ಥಿಗಳು ನಿರಂತರವಾಗಿ ಧರಣಿ ನಡೆಸುತ್ತಿದ್ದು, ಕವಿವಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿಲ್ಲ. ಕವಿವಿಯ ಎಸ್‌ಸಿ, ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತವರ್ಷ ಲ್ಯಾಪ್‌ಟಾಪ್ ನೀಡುವಲ್ಲಿ ಕವಿವಿ ಅನ್ಯಾಯ ಮಾಡುತ್ತಲೇ ಬಂದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.

ಈ ಧರಣಿಗೆ ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ದೀಪಕ ಚಿಂಚೋರೆ ಬೆಂಬಲ ಸೂಚಿಸಿ, ಕವಿವಿ ಆಡಳಿತ ವೈಖರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೂಡಲೇ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡುವಂತೆ ಶಾಸಕರು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

08/09/2022 06:24 pm

Cinque Terre

18.65 K

Cinque Terre

1

ಸಂಬಂಧಿತ ಸುದ್ದಿ