ಹುಬ್ಬಳ್ಳಿ: ಕನ್ನಡ ಚಕ್ರವರ್ತಿ, ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಪ್ರತಿಮೆಯನ್ನು ಚಾಲುಕ್ಯರ ರಾಜಧಾನಿ ಬಾದಾಮಿಯಲ್ಲಿ ಹಾಗೂ ಬೆಂಗಳೂರಿನ ವಿಧಾನಸೌಧದ ಮುಂದೆ ಸ್ಥಾಪಿಸಬೇಕೆಂದು ಕದಂಬ ಸೈನ್ಯ ಕನ್ನಡ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ್ ಒತ್ತಾಯಿಸಿದರು.
ಉತ್ತರ ಪಥೇಶ್ವರ ಹರ್ಷವರ್ಧನನು ಇಮ್ಮಡಿ ಪುಲಿಕೇಶಿಯ ಎದುರು ಸೋಲನ್ನು ಒಪ್ಪಿಕೊಂಡು, ಇಮ್ಮಡಿ ಪುಲಿಕೇಶಿಗೆ ದಕ್ಷಿಣ ಪಥೇಶ್ವರ ಬಿರುದು ನೀಡಿದ್ದಾನೆ. ದಕ್ಷಿಣ ಪಥೇಶ್ವರ ಇಮ್ಮಡಿ ಪುಲಕೇಶಿ ಮನಸ್ಸು ಮಾಡಿದ್ದರೆ ಭಾರತದ ಚಕ್ರರ್ತಿಯಾಗಿ ಮರೆಯಬಹುದಿತ್ತು. ಅಲ್ಲದೇ ರಾಜ್ಯದಲ್ಲಿ ಇಮ್ಮಡಿ ಪುಲಕೇಶಿಯ ಒಂದೇ ಒಂದು ಪುತ್ಥಳಿ ಇಲ್ಲದಿರುವುದು ಅತ್ಯಂತ ನೋವಿನ ಸಂಗತಿ. ಈ ದಿಸೆಯಲ್ಲಿ ಸಾಹಸ, ಸಾಧನೆ, ಸೌಹಾರ್ದ, ಸಾಮರಸ್ಯ ಕರುನಾಡ ಮನೆ, ಮನಗಳಿಗೆ ತಿಳಿಸುವ ಉದ್ದೇಶದಿಂದ ದಿಗ್ವಿಜಯ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಬೆಂಗಳೂರಿನ ವಿಧಾನಸೌಧ ಹಾಗೂ ಬಾದಾಮಿಯಲ್ಲು ಇಮ್ಮಡಿ ಪುಲಿಕೇಶಿ ಸ್ಥಾಪಿಸಬೇಕೆಂದು ಆಗ್ರಹಿಸಿದರು.
Kshetra Samachara
13/09/2022 12:40 pm