ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹಿಂದಿ ದಿವಸ ಆಚರಣೆಗೆ ಜೆಡಿಎಸ್ ಕಾರ್ಯಕರ್ತರ ವಿರೋಧ

ಧಾರವಾಡ: ಸೆ.14 ರಂದು ಆಚರಿಸಲು ನಿರ್ಧರಿಸಲಾಗಿರುವ ಹಿಂದಿ ದಿವಸ ಆಚರಣೆಗೆ ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದೆ. ಈ ಹಿಂದಿ ದಿವಸ ಆಚರಣೆ ಮಾಡಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಭಾರತವು ಸಾಮಾಜಿಕ, ಸಾಂಸ್ಕೃತಿಕವಾಗಿ ಅನೇಕ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ. ಸೆಪ್ಟೆಂಬರ್ 14 ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ "ಹಿಂದಿ ದಿವಸ"ವನ್ನು ಕರ್ನಾಟಕದಲ್ಲಿ ಒತ್ತಾಯ ಪೂರ್ವಕವಾಗಿ ಆಚರಿಸುವುದು, ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

14/09/2022 06:10 pm

Cinque Terre

17.68 K

Cinque Terre

1

ಸಂಬಂಧಿತ ಸುದ್ದಿ