ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂದ್ರೆ ಸುಧಾರಣೆ, ಸುಸ್ಥಿರ ಹಾಗೂ ಸಮರ್ಥ ಆಡಳಿತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಣಿಸಿದರು. ನರೇಂದ್ರ ಮೋದಿಯವರ ಜನ್ಮ ದಿನದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ರಾಷ್ಟ್ರೋತ್ಥಾನ ರಕ್ತ ನಿಧಿಯಲ್ಲಿ ರಕ್ತದಾನ ಮಾಡಿ ಮಾತನಾಡಿದ ಅವರು, ಮೋದಿ ಹುಟ್ಟು ಹಬ್ಬದ ಹಿನ್ನೆಲೆ ಹಲವು ಸೇವಾ ಕಾರ್ಯಗಳನ್ನ ಹಮ್ಮಿಕೊಳ್ಳಲಾಗಿದೆ.
ಹುಬ್ಬಳ್ಳಿ ಧಾರವಾಡದಲ್ಲಿ ಹಲವು ಕಡೆ ಸ್ವಯಂ ಪ್ರೇರಿತವಾಗಿ ರಕ್ತದಾನ ಸೇರಿ ವಿವಿದ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಯುವಕರು ಸಾಕಷ್ಠು ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡ್ತಾಯಿದ್ದಾರೆ. ದಾಖಲೆಯ ಮಟ್ಟದಲ್ಲಿ ರಕ್ತದಾನ ನಡೆಯಲಿದೆ ಎಂದರು. ಕೇಂದ್ರ ಸಚಿವರಿಗೆ ಮಾಜಿ ಸಿ ಎಂ ಜಗದೀಶ ಶೆಟ್ಟರ್ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/09/2022 02:47 pm