ಹುಬ್ಬಳ್ಳಿ: ಪಂಚಮಸಾಲಿ ಸಮುದಾಯದ ಮೀಸಲಾತಿಗೆ ರಾಜಕೀಯ ಮುಖಂಡರೊಬ್ಬರು ಅಡ್ಡಿಪಡಿಸುತ್ತಿದ್ದು, ಅವರ ಹೆಸರನ್ನು ಶೀಘ್ರ ಬಹಿರಂಗ ಪಡಿಸುವುದಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿಗೆ ಸಂಬಂಧಪಟ್ಟಂತೆ ನಾಲ್ಕು ಬಾರಿ ಕೊಟ್ಟ ಮಾತಿಗೆ ಸರ್ಕಾರ ತಪ್ಪಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಮುಖಂಡರೊಬ್ಬರು ಒತ್ತಡ ಹೆರುತ್ತಿದ್ದಾರೆ. ಅವರ ಹೆಸರನ್ನು ನಾಳೆ ನಡೆಯುವ ಶಿಗ್ಗಾಂವಿ ಹೋರಾಟದಲ್ಲಿ ಬಹಿರಂಗಪಡಿಸಲಾಗುವುದು ಎಂದರು.
ಸರ್ಕಾರ ಮತ್ತೆ ಗಡುವು ಕೇಳಿದರೇ ನಾವು ಒಪ್ಪುವುದಿಲ್ಲ. ಹಿಂದೂಳಿದ ವರ್ಗಗಳ ಆಯೋಗದ ವರದಿಯನ್ನು ಪಡೆದಿಲ್ಲ. ಸರ್ವೇ ಕೂಡಾ ನಡೆಸುತ್ತಿಲ್ಲ. ಸರ್ಕಾರದ ಈ ನಡೆಗೆ ಪಂಚಮಸಾಲಿ ಸಮುದಾಯ ಬೇಸತ್ತಿದ್ದಾರೆ. ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೇ ಅಕ್ಟೋಬರ್, ಇಲ್ಲವೇ ನವೆಂಬರ್ ತಿಂಗಳಲ್ಲಿ 25 ಲಕ್ಷ ಜನರೊಂದಿಗೆ ವಿಧಾನಸಭೆಗೆ ಮುತ್ತಿಗೆ ಹಾಕಿ ಮಾಡು ಇಲ್ಲವೇ ಮಡಿ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.
ಇದು ಪಕ್ಷಾತೀತ ಹೋರಾಟವಾಗಿದ್ದು, ಬಿಜೆಪಿಯ ಶಾಸಕರು, ಸಚಿವರು ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಚರ್ಚೆಗೆ ಸಮುದಾಯದ ಹದಿನೈದು ಶಾಸಕರು ಸಭಾಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ, ಕಾದುನೋಡಬೇಕಿದೆ ಎಂದರು. ಇನ್ನೂ ಹೋರಾಟಗಾರರ ಮೇಲೆ ಇಡಿ ದಾಳಿ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿಸ ಕಾಶಪನವರ್ ಯಾವ ಇಡಿ, ಐಟಿ ಬಂದರೂ ಹೆದರುವದಿಲ್ಲ ಎಂದರು.
Kshetra Samachara
19/09/2022 09:10 pm