ನವಲಗುಂದ: ಹಿಂದೂ ಸಮಾಜೋತ್ಸವ, ಜನಜಾಗೃತಿ ಸಮಾವೇಶ ಮತ್ತು ಲವ್ ಜಿಹಾದ್ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಕೋಮು-ದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಕೆಲವು ಹಿಂದುತ್ವ ಸಂಘಟನೆಗಳ ಪ್ರಮುಖರ ವಿರುದ್ಧ ದಾಖಲಿಸಲಾಗಿದ್ದ ಒಟ್ಟು 34 ಮೊಕದ್ದಮೆಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ತೀರ್ಮಾನಿಸಲಾಗಿದ್ದು, ಈ ಪೈಕಿ ರೈತರಿಗೆ ಸಂಬಂಧಿಸಿದ ಕೆಲವು ಪ್ರಕರಣಗಳಿದ್ದು, ಅದರಲ್ಲಿ ಮಹದಾಯಿ ರೈತ ಹೋರಾಟಗಾರರ ಮೇಲೆ ಹಾಕಿದ ಮೊಕದ್ದಮೆ ಹಿಂಪಡೆಯಲು ಮುಂದಾಗದೆ ಇರೋದು ಈಗ ನವಲಗುಂದ ಭಾಗದ ಮಹದಾಯಿ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.
Kshetra Samachara
23/09/2022 12:45 pm