ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಾಷ್ಟ್ರಪತಿಗಳಿಂದ ಐಐಐಟಿ ಕ್ಯಾಂಪಸ್ ಉದ್ಘಾಟನೆ

ಧಾರವಾಡ: ಧಾರವಾಡದಲ್ಲಿ ನಿರ್ಮಾಣವಾಗಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ನೂತನ ಕ್ಯಾಂಪಸ್‌ನ್ನು ಸೆ.26 ರಂದು ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಲೋಕಾರ್ಪಣೆಗೊಳಿಸಲಿದ್ದಾರೆ.ಸೆಪ್ಟಂಬರ್ 26 ರಂದು ಮಧ್ಯಾಹ್ನ 3ಕ್ಕೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್‍ನಲ್ಲಿ ಈ ಲೋಕಾರ್ಪಣಾ ಸಮಾರಂಭವನ್ನು ಆಯೋಜಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು, ಕೈಗಾರಿಕಾ ಪಾಲುದಾರರಾದ ಕಿಯಾನಿಕ್ಸ್, ಇನ್ಫೋಸಿಸ್‍ನ ಪ್ರತಿನಿಧಿಗಳು, ಕಾಲೇಜಿನ ಬೋರ್ಡ್ ಆಫ್ ಗವರ್ನರ್ಸ್, ಸೆನಟ್, ಹಣಕಾಸು ಸಮಿತಿ, ಕಟ್ಟಡ ಮತ್ತು ಕಾಮಗಾರಿ ಸಮಿತಿಯವರು, ಪ್ರತಿಷ್ಠಿತ ಸಂಸ್ಥೆಗಳ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಕಾರ್ಯಕ್ರಮಕ್ಕೆ ಆಗಮಿಸುವರು.

ಧಾರವಾಡದಲ್ಲಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯು ಸಾರ್ವಜನಿಕ ಖಾಸಗಿ-ಕೈಗಾರಿಕಾ ಪಾಲುದಾರಿಕೆಯ ಮಾದರಿಯಲ್ಲಿ ಭಾರತ ಸರ್ಕಾರ, ಕರ್ನಾಟಕ ಸರಕಾರ ಹಾಗೂ ಕೈಗಾರಿಕಾ ಸಂಸ್ಥೆಯಾದ ಕಿಯೋನಿಕ್ಸ್ ಇವುಗಳ ಸಹಭಾಗಿತ್ವದೊಂದಿಗೆ 2015 ಲ್ಲಿ ಅಸ್ತಿತ್ವಕ್ಕೆ ಬಂತು. ದೇಶದಲ್ಲಿ ಮಾಹಿತಿ ತಂತ್ರಜ್ಞಾನ ಉನ್ನತ ಶಿಕ್ಷಣ, ವೃತ್ತಿಪರ ಪರಿಣತಿ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಉದ್ದೇಶಕ್ಕೆ ಈ ಸಂಸ್ಥೆಯನ್ನು ಸ್ಥಾಪಿಸಲಾಯಿತು. 2017 ಸಂಸತ್ತಿನ 23 ನೇ ಕಾಯ್ದೆಯಡಿಯಲ್ಲಿ ಈ ಸಂಸ್ಥೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯೆಂದು ಘೋಷಿಸಲಾಗಿದೆ.

ಹೊಸ ಹುರುಪಿನಲ್ಲಿ ಆರಂಭವಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡಕ್ಕೆ ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ, ಶೈಕ್ಷಣಿಕ ಮತ್ತು ಸಂಶೋಧನಾ ಸಮುದಾಯಕ್ಕೆ ಬದಲಾವಣೆ ತರುವಂತಹ ಅಪರೂಪದ ಅವಕಾಶವನ್ನು ಹೊಂದಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರವು ಈಗಾಗಲೇ ಉತ್ತರ ಕರ್ನಾಟಕದಲ್ಲಿ ತಾಂತ್ರಿಕ, ಕೃಷಿ, ವೈದ್ಯಕೀಯ, ಕಾನೂನು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಉತ್ಕೃಷ್ಟ ಶೈಕ್ಷಣಿಕ ಸಂಸ್ಥೆಯನ್ನು ಹೊಂದಿದ್ದು, ಶೈಕ್ಷಣಿಕ ನಗರಿ ಎಂದು ಪ್ರಸಿದ್ಧಿ ಪಡೆದಿದೆ.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

23/09/2022 04:05 pm

Cinque Terre

24.83 K

Cinque Terre

0

ಸಂಬಂಧಿತ ಸುದ್ದಿ