ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ರಾಷ್ಟ್ರಪತಿ ಆಗಮನ ಹಿನ್ನೆಲೆ, ಐಐಐಟಿಗೆ ಶಾಸಕ ಬೆಲ್ಲದ ಭೇಟಿ

ಧಾರವಾಡ : ಐಐಐಟಿ ಉದ್ಘಾಟನೆಗೆ ಸೋಮವಾರ ಧಾರವಾಡಕ್ಕೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಐಐಐಟಿಗೆ ಭೇಟಿ ನೀಡಿದ ಶಾಸಕ ಅರವಿಂದ ಬೆಲ್ಲದ ಅವರು, ಅಲ್ಲಿನ ಪೂರ್ವಸಿದ್ಧತಾ ಕಾರ್ಯಗಳನ್ನು ಪರಿಶೀಲನೆ ನಡೆಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಅವರು ಈ ಕಾರ್ಯಕ್ರಮದ ಬಂದೋಬಸ್ತ್ ಜವಾಬ್ದಾರಿ ಹೊತ್ತಿದ್ದು, ಐಐಐಟಿಯಲ್ಲಿನ ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಶಾಸಕ ಅರವಿಂದ ಬೆಲ್ಲದ ಅವರು, ಕೇಂದ್ರಕ್ಕೆ ಭೇಟಿ ನೀಡಿ ಮುಖ್ಯವೇದಿಕೆ, ಪೊಲೀಸ್ ಬಂದೋಬಸ್ತ್ ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು.

ರಾಷ್ಟ್ರಪತಿಗಳೊಂದಿಗೆ ಸಂವಾದ ನಡೆಯಲಿದ್ದು, ಅವರಿಗೆ ಬೇಕಾದ ಊಟದ ವ್ಯವಸ್ಥೆಯನ್ನೂ ಇಲ್ಲೇ ಮಾಡಲಾಗಿದೆ. ನಾಳೆ ಭದ್ರತೆಗೆ ಎಸ್‌ಪಿಜಿ ಬರಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ 700 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಐಐಐಟಿಗೆ ಜಾಗ ಕೊಟ್ಟ ರೈತರು, ವಿದ್ಯಾರ್ಥಿಗಳು, ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಬೆಲ್ಲದ ಮಾಹಿತಿ ನೀಡಿದರು.

ಸೋಮವಾರ ನಡೆಯಲಿರುವ ಐಐಐಟಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ಒಂದು ಗಂಟೆ ಸಮಯ ಮೀಸಲಿಟ್ಟಿದ್ದು, ಈಗಾಗಲೇ ಐಐಐಟಿ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/09/2022 03:37 pm

Cinque Terre

44.31 K

Cinque Terre

1

ಸಂಬಂಧಿತ ಸುದ್ದಿ